ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನಸಿದ ಕಡಲೆ ಕಾಳು ತಿನ್ನುವುದರಿಂದ ಏನು ಪ್ರಯೋಜನ ….?

ArogyaVijaya Kannada
2 Min Read

 

ಕಡಲೆ ಕಾಳು  ತುಂಬಾ ಆರೋಗ್ಯಕರ  ಆಹಾರ. ಇದು ಕಬ್ಬಿಣದ ಉತ್ತಮ ಮೂಲವಾಗಿದೆ. ಇದಲ್ಲದೆ, ಪ್ರೋಟೀನ್, ಕ್ಯಾಲ್ಸಿಯಂನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದನ್ನು ಹಲವು ವಿಧದ ಪಾಕವಿಧಾನಗಳ ರೂಪದಲ್ಲಿ ಸೇವಿಸಬಹುದು. ಇದಲ್ಲದೇ ಹೆಚ್ಚಿನವರು ಇದನ್ನು ನೆನೆಸಿಟ್ಟು ತಿನ್ನಲು ಇಷ್ಟಪಡುತ್ತಾರೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಕಾಳುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ. ನಿಮ್ಮ ಹೆಚ್ಚುತ್ತಿರುವ ತೂಕವನ್ನು ನಿಯಂತ್ರಿಸುವುದರಿಂದ ಹಿಡಿದು ಮೂಳೆ ಸಮಸ್ಯೆಗಳನ್ನು ನಿವಾರಿಸುತ್ತದೆ.

ನೆನೆಸಿದ ಕಾಳುಗಳನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳು : 

ಮೊದಲೇ ಹೇಳಿದ ಹಾಗೆ ಕಡಲೆ ಕಾಳು ಪ್ರೋಟೀನ್ ಮತ್ತು ಕಬ್ಬಿಣದಲ್ಲಿ ಸಮೃದ್ಧವಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಕಾಳುಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಹಿಮೋಗ್ಲೋಬಿನ್‌ ಪಡೆಯುವುದು ಸಾಧ್ಯವಾಗುತ್ತದೆ. ಈ ಕಾರಣದಿಂದಾಗಿ, ದೌರ್ಬಲ್ಯ ಮತ್ತು ಆಯಾಸ ಸಮಸ್ಯೆ ನಿವಾರಣೆಯಾಗುತ್ತದೆ. ಬೆಳಗಿನ ಉಪಾಹಾರದಲ್ಲಿ ನೆನೆಸಿದ ಕಡಲೆ ಕಾಳು ತಿನ್ನುವುದರಿಂದ, ದಿನವಿಡೀ ಶಕ್ತಿಯುತವಾಗಿರಬಹುದು.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ : 
ನೆನೆಸಿದ ಕಡಲೆ ಕಾಳುಗಳನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಬಹುದು. ಇದರಲ್ಲಿ ಉತ್ತಮ ಪ್ರಮಾಣದ ಫೈಬರ್ ಅಂಶ ಕೂಡಾ ಇದೆ. ಇದು ನಿಮ್ಮ ದೇಹದಲ್ಲಿರುವ ವಿಷವನ್ನು ಹೊರಹಾಕುತ್ತದೆ. ಇದರೊಂದಿಗೆ ಮಲಬದ್ಧತೆ, ಅಜೀರ್ಣ, ಅಸಿಡಿಟಿಯಂತಹ ಸಮಸ್ಯೆಗಳನ್ನು ದೂರ ಮಾಡಬಹುದು.

ಹೃದಯದ ಆರೋಗ್ಯಕ್ಕೆ ಬೆಸ್ಟ್ : 
ಕಡಲೆ ಕಾಳಿನಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಫೈಟೊನ್ಯೂಟ್ರಿಯೆಂಟ್‌ಗಳು ಸಮೃದ್ಧವಾಗಿವೆ. ಇದು ನಿಮ್ಮ ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ. ಇದಲ್ಲದೆ ಇದರಲ್ಲಿರುವ ಪೋಷಕಾಂಶಗಳು ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ

ತೂಕ ನಷ್ಟದಲ್ಲಿ ಪರಿಣಾಮಕಾರಿ : 
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಕಾಳುಗಳನ್ನು ತಿನ್ನುವುದರಿಂದ ತೂಕವನ್ನು ನಿಯಂತ್ರಿಸಬಹುದು. ಇದು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದಲ್ಲದೆ, ಫೈಬರ್ ಕೂಡಾ ಅಧಿಕ ಪ್ರಮಾಣದಲ್ಲಿ ಇದೆ. ಇದು ನಿಮ್ಮ ಹೊಟ್ಟೆಯನ್ನು ದೀರ್ಘಕಾಲದವರೆಗೆ ತುಂಬಿರುವಂತೆ ಮಾಡುತ್ತದೆ.  ಬೆಳಿಗ್ಗೆ ಆರೋಗ್ಯಕರ ಉಪಹಾರವಾಗಿ ಕಡಲೆ ಕಾಳನ್ನು ಸೇವಿಸಬಹುದು.

ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ : 
ನೆನೆಸಿದ ಕಾಳುಗಳಲ್ಲಿ ಕರಗುವ ನಾರಿನಂಶವಿದ್ದು, ದೇಹದಲ್ಲಿ ಹೆಚ್ಚುತ್ತಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಇದು ಪರಿಣಾಮಕಾರಿಯಾಗಿದೆ.  ಏರುತ್ತಿರುವ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬೇಕಾದರೆ ಇದನ್ನು ಸೇವಿಸಬೇಕು. ಇದರಿಂದ ಹೃದಯದ ಆರೋಗ್ಯವನ್ನೂ ಸುಧಾರಿಸಬಹುದು.

Share this Article
Leave a comment

Leave a Reply

Your email address will not be published. Required fields are marked *