ದಾವಣಗೆರೆ : ಎಸ್.ಎಸ್. ಕೇರ್ ಟ್ರಸ್ಟ್ (SS CARE TRUST) ಹಾಗೂ ಆಂಜನೇಯ ಬಡಾವಣೆಯ ಹಿತರಕ್ಷಣಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಆರೋಗ್ಯ ತಪಾಸಣೆ ಶಿಬಿರವನ್ನು ಆಂಜನೇಯ ಬಡಾವಣೆಯ ಲೈಬ್ರೆರಿ ಹಾಗೂ ಯೋಗ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ಸ್ಪಂದನ ಎನ್ನುವ ಮಹಿಳೆಯರ ಆರೋಗ್ಯ ಕುರಿತಂತೆ ಶಿಬಿರ ನಡೆಸಲಾಗುತ್ತಿದೆ. ಅದರಲ್ಲೂ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಶಿಬಿರ ಆಯೋಜಿಸಲಾಗಿದ್ದು, 100 ಕ್ಕೂ ಹೆಚ್ಚು ಜನ ಮಹಿಳೆಯರು ನೋಂದಣಿ ಮಾಡಿಕೊಂಡಿದು, ನಗರದಲ್ಲಿ, ಉತ್ತಮ ಸ್ಪಂದನೆ ದೊರಕಿದೆ ಎಂದು ಎಸ್‌ಎಸ್ ಕೇರ್ ಟ್ರಸ್ಟ್ ನ ಲೈಫ್ ಟ್ರಸ್ಟಿ ಯಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆ ಎಲ್ಲಾ ಕಡೆಗಳಲ್ಲಿ ಇಂತಹ ಶಿಬಿರಗಳನ್ನು ನಡೆಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಸುಮಾರು 2ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಮಾಹಿತಿ ನೀಡಲಾಗಿದೆ. ಇದೀಗ ವಾರ್ಡುವಾರು ತಪಾಸಣಾ ಶಿಬಿರ ನಡೆಸಲಾಗುತ್ತಿದೆ. ದಾವಣಗೆರೆ ನಗರದಂತ ಇಂತಹ ಶಿಬಿರ ನಡೆಸಲಾಗುವುದು. ಇದಲ್ಲದೇ ಬಾಪೂಜಿ ಆರೋಗ್ಯ ಕಾರ್ಡು ಬಗ್ಗೆಯೂ ಉತ್ತಮ ಸ್ಪಂದನೆ ದೊರಕಿದೆ ಎಂದು ತಿಳಿಸಿದರು.
ಶಿಬಿರವನ್ನು ಎಸ್.ಎಸ್.ಕೇರ್ ಟ್ರಸ್ಟ್ ಲೈಫ್ ಟ್ರಸ್ಟಿ ಯಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟನೆ ಮಾಡಿದರು ಸಮಿತಿಯ ಗೌರವಾಧ್ಯಕ್ಷರಾದ ಕೆ ಎಸ್ ಈಶ್ವರಪ್ಪ, ಅಧ್ಯಕ್ಷರಾದ ಕುಸುಮ ಲೋಕೇಶ್, ಶೀಲಾ ಅನಿಲ್ ಗೌಡ್ರು, ಅನಿಲ್ ಗೌಡ್ರು ಸೇರಿದಂತೆ ಸ್ಥಳೀಯರು ಹಾಗೂ ಬಾಪೂಜಿ ಆಸ್ಪತ್ರೆಯ ವೈದ್ಯರು ಸಿಬ್ಬಂದಿಗಳು ಉಪಸ್ಥಿತರಿದ್ದರು.