ಆಧುನಿಕ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ಪ್ರತಿಯೊಬ್ಬರಲ್ಲೂ ಮಧುಮೇಹ (Sukkare Kaimale), ಅಧಿಕ ರಕ್ತದೊತ್ತಡ ಹಾಗೂ ತೂಕ ಹೆಚ್ಚಳದಂತಹ ಸಮಸ್ಯೆಗಳು ಸಾಮಾನ್ಯವಾಗುತ್ತಿವೆ. ಇಂತಹ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುವ , ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಅತ್ಯಂತು ಪ್ರಮುಖ ಸ್ಥಾನವನ್ನು ಪಡೆದುಕೊಂಡಿವೆ. ಪೌಷ್ಟಿಕಾಂಶಗಳ ಗಣಿಯಾಗಿರುವ ಮಖಾನಾವನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ದೇಹಕ್ಕೆ ಅದೆಷ್ಟೋ ರೀತಿಯ ಆರೋಗ್ಯ ಪ್ರಯೋಜನಗಳು ದೊರೆಯುತ್ತವೆ.
ಮಖಾನಾ ಸೇವನೆಯ ಪ್ರಮುಖ ಆರೋಗ್ಯ ಪ್ರಯೋಜನಗಳು
-
ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣ: ಮಖಾನಾದಲ್ಲಿ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ (Low Glycemic Index) ಇರುವುದರಿಂದ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹಠತ್ ಏರಿಕೆಯಾಗದಂತೆ ತಡೆಯುತ್ತದೆ. ಇದು ಮಧುಮೇಹಿಗಳಿಗೆ ಅತ್ಯುತ್ತಮ ಆಹಾರವಾಗಿದೆ.
-
ರಕ್ತದೊತ್ತಡ ಮತ್ತು ಮೂಳೆಗಳ ಬಲ: ಇದರಲ್ಲಿರುವ ಅಧಿಕ ಪೊಟ್ಯಾಸಿಯಮ್ ಅಂಶವು ರಕ್ತದೊತ್ತಡವನ್ನು ಹತೋಟಿಯಲ್ಲಿಡಲು ಸಹಾಯ ಮಾಡುತ್ತದೆ. ಹಾಗೂ ಕ್ಯಾಲ್ಸಿಯಂ ಸಮೃದ್ಧವಾಗಿರುವುದರಿಂದ ಮೂಳೆಗಳನ್ನು ಬಲಪಡಿಸುತ್ತದೆ.
-
ತೂಕ ಇಳಿಕೆಗೆ ಸಹಕಾರಿ: ಕ್ಯಾಲೋರಿಗಳು ಮತ್ತು ಕೊಬ್ಬಿನಂಶ ಅತ್ಯಂತ ಕಡಿಮೆ ಇದ್ದು, ಪ್ರೋಟೀನ್ ಹಾಗೂ ನಾರಿನಂಶ ಹೆಚ್ಚಿರುವುದರಿಂದ, ಇದು ಹೊಟ್ಟೆಯನ್ನು ದೀರ್ಘಕಾಲ ತುಂಬಿರುವಂತೆ ಮಾಡಿ ತೂಕ ಇಳಿಸಲು ನೆರವಾಗುತ್ತದೆ.
-
ಜೀರ್ಣಕ್ರಿಯೆ ಮತ್ತು ಮಲಬದ್ಧತೆ ನಿವಾರಣೆ: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮಖಾನಾ ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ. ಜೊತೆಗೆ ಮಲಬದ್ಧತೆ ಹಾಗೂ ಅಸಿಡಿಟಿ ಸಮಸ್ಯೆಯನ್ನು ಗುಣಪಡಿಸುತ್ತದೆ.
-
ರೋಗನಿರೋಧಕ ಶಕ್ತಿ ಮತ್ತು ಚರ್ಮದ ಕಾಂತಿ: ಮಖಾನಾದಲ್ಲಿರುವ ಉತ್ಕರ್ಷಣ ನಿರೋಧಕಗಳು (Antioxidants) ದೇಹದ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವುದರೊಂದಿಗೆ, ಚರ್ಮವನ್ನು ಯೌವನಯುತವಾಗಿ ಮತ್ತು ಕಾಂತಿಯುತವಾಗಿಡಲು ಸಹಾಯ ಮಾಡುತ್ತದೆ.