ದಾವಣಗೆರೆ : ಮಳೆಗಾಲದಲ್ಲಿ ಅನಾರೋಗ್ಯ ಎದುರಾಗುವುದು ಸಾಮಾನ್ಯ. ರೋಗನಿರೋಧಕ ಶಕ್ತಿಯು ನಮ್ಮ ದೇಹವನ್ನು ಸಾಂಕ್ರಾಮಿಕ ಜೀವಿಗಳಿಂದ ರಕ್ಷಿಸುತ್ತದೆ. ರೋಗನಿರೋಧಕ ಶಕ್ತಿಯ ಹೊರತು ನಮ್ಮ ದೇಹಕ್ಕೆ ಹಲವಾರು ರೀತಿಯ ಬ್ಯಾಕ್ಟೀರಿಯಗಳು, ವೈರಸ್ಗಳು ಮತ್ತು ಇತರ ರೋಗಕಾರಕಗಳು ನಮ್ಮ ದೇಹವನ್ನು ಆಕ್ರಮಣ ಮಾಡುತ್ತವೆ. ಅಂದರೆ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯು ಉತ್ತಮ ಮಟ್ಟದಲ್ಲಿ ಇದ್ದರೆ, ಪದೇಪದೇ ಕಾಯಿಲೆಗೆ ಬೀಳುವ ಸಂದರ್ಭ ಎದುರಾಗುವುದಿಲ್ಲ. ಆದ್ದರಿಂದ ಒಬ್ಬ ವ್ಯಕ್ತಿಯು ಆರೋಗ್ಯಯುತವಾಗಿ ಇರಬೇಕೆಂದರೆ ಆ ವ್ಯಕ್ತಿಯಲ್ಲಿ ರೋಗನಿರೋಧಕ ಶಕ್ತಿಯ ಮಟ್ಟ ಹೆಚ್ಚಿನ ಪ್ರಮಾಣದಲ್ಲಿ ಇರಬೇಕಾಗುತ್ತದೆ.
ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಆಗಾಗ್ಗೆ ಜ್ವರ, ಕೆಮ್ಮು ಮತ್ತು ಶೀತ, ಅತಿಯಾದ ಆಯಾಸ, ಗಾಯಗಳು ಒಣಗದೆ ಇರುವುದು, ಸೋಮಾರಿತನ, ಜೀರ್ಣಕ್ರಿಯೆಯಲ್ಲಿ ಸಮಸ್ಯೆಗಳು ಎದುರಾಗುತ್ತಲೇ ಇರುತ್ತವೆ.ದೇಹಕ್ಕೆ ಸೋಂಕು ತಗುಲಿದ ಸಂದರ್ಭದಲ್ಲಿ ಈ ಪೌಷ್ಟಿಕಾಂಶ ದೇಹಕ್ಕೆ ಶಕ್ತಿಯನ್ನು ಹೆಚ್ಚಿಸುತ್ತದೆ. ಹೀಗಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಅತ್ಯಗತ್ಯವಾಗಿರುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಮೊದಲು ನಮ್ಮ ಆಹಾರದ ಕ್ರಮವನ್ನು ಬದಲಾಯಿಸಿಕೊಳ್ಳಬೇಕು. ಸೊಪ್ಪು, ತರಕಾರಿ, ಹಣ್ಣುಗಳ ಸೇವನೆ ಮಾಡಬೇಕು. ಶುಂಠಿ, ಲವಂಗ, ಕರಿಮೆಣಸು ಪ್ರತಿನಿತ್ಯ ಸೇವನೆ ಮಾಡುವುದರಿಂದಲೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಮೊಳಕೆ ಕಾಳುಗಳು,ಗೋಡಂಬಿ, ಕುಂಬಳಕಾಯಿ ಬೀಜಗಳು, ಸೇವನೆ ಮೂಲಕವೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.
ಮೀನು ಮತ್ತು ಚಿಕನ್ ಕೂಡ ನಮ್ಮ ಆರೋಗ್ಯಕ್ಕೆ ಒಳ್ಳೆಯದು. ಹುಳಿ ಮತ್ತು ಸಿಹಿ ಮಿಶ್ರಣದ ಹಣ್ಣುಗಳು ನಮ್ಮ ದೇಹದಲ್ಲಿ ಸೋಂಕುಗಳ ವಿರುದ್ಧ ಹೋರಾಡುವ ಗುಣವನ್ನು ಪಡೆದುಕೊಂಡಿರುತ್ತದೆ. ವಿಟಮಿನ್ ಸಿ ಅಂಶದ ಪ್ರಮಾಣ ಮಾವಿನಹಣ್ಣು ಮತ್ತು ಸ್ಟ್ರಾಬೆರಿ ಹಣ್ಣುಗಳಲ್ಲಿ ಹೆಚ್ಚು ಸಿಗುವುದರಿಂದ ಜೊತೆಗೆ ಆಂಟಿಆಕ್ಸಿಡೆಂಟ್ ಅಂಶಗಳು ಸಹ ಇದರಲ್ಲಿ ಇರುವುದರಿಂದ ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಲು ಮತ್ತು ಹಾಲಿನ ಉತ್ಪನ್ನಗಳ ಸೇವನೆಯು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ ಮತ್ತು ರೋಗ ನಿರೋಧಕ ಶಕ್ತಿಯನ್ನೂ ಇದು ಹೆಚ್ಚಿಸುತ್ತದೆ. ಕೆಲವು ಆಹಾರ ಪದಾರ್ಥಗಳನ್ನು ಈ ಋತುವಿನಲ್ಲಿ ಸೇವಿಸುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ಋತುವಿನಲ್ಲಿ, ವಿಶೇಷವಾಗಿ ಕೆಲವು ತರಕಾರಿಗಳನ್ನು ಸೇವಿಸುವುದನ್ನು ತಪ್ಪಿಸಬೇಕು. ಮಳೆಯೊಂದಿಗೆ ಕೆಲವು ಸಮಸ್ಯೆಗಳು ಕೂಡಾ ಹುಟ್ಟಿಕೊಳ್ಳುತ್ತವೆ. ಅವು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಈ ಋತುವಿನಲ್ಲಿ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುತ್ತದೆ. ಇದರಿಂದಾಗಿ ದೇಹವು ತ್ವರಿತವಾಗಿ ರೋಗಗಳಿಗೆ ಗುರಿಯಾಗುತ್ತದೆ .ಮಳೆಗಾಲದಲ್ಲಿ ತೇವಾಂಶ ಮತ್ತು ಕೊಳಕು ಅಡಗಿರುತ್ತದೆ. ಈ ಕಾರಣದಿಂದಾಗಿ, ಬ್ಯಾಕ್ಟೀರಿಯಾಗಳು ಅವುಗಳೊಳಗೆ ಬೆಳೆಯಲು ಆರಂಭಿಸುತ್ತದೆ. ಅದು ಬರಿಗಣ್ಣಿಗೆ ಗೋಚರಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಈ ಋತುವಿನಲ್ಲಿ ಪಾಲಕ್, ಎಲೆಕೋಸು ಮುಂತಾದ ತರಕಾರಿಗಳನ್ನು ಸೇವಿಸದಿರುವುದು ಉತ್ತಮ.