ಪೋಷಕರೇ ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಎಚ್ಚರ ?

  • ದಾವಣಗೆರೆ : (ಅ.ವಿ) ಜು.16:  ಪೋಷಕರೇ  ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಎಚ್ಚರ 
    ಮೊಬೈಲ್​​ ನಿಂದ ಮಕ್ಕಳಿಗೆ ದೃಷ್ಟಿ ದೋಷ
    ಒಂದರ್ಥದಲ್ಲಿ ಮೊಬೈಲ್‌ ಬಳಸೋದು ಒಂದು ವ್ಯಸನದ ರೀತಿ ಪರಿವರ್ತನೆಯಾಗಿದೆ. ಇದರಿಂದ ನಮ್ಮ ಕಣ್ಣಿಗೂ ಮನಸ್ಸಿಗೂ ಆರೋಗ್ಯಕ್ಕೂ ಒಂದು ರೀತಿ ಸಮಸ್ಯೆ ಅನ್ನೋದು ಗೊತ್ತಿದ್ರು ನಾವ್ಯಾರು ಮೊಬೈಲ್‌ ಬಳಸುವುದನ್ನು ಕಡಿಮೆ ಮಾಡಲ್ಲ. ಹದಿ ಹರೆಯದವರಾದ್ರು ಓಕೆ ಆದರೆ ಪುಟ್ಟ ಪುಟ್ಟ ಮಕ್ಕಳು ಈ ಮೊಬೈಲ್‌ ಬಳಸಿ ಅದೆಂಥ ಸಂಕಷ್ಟಕ್ಕೆ ಸಿಲುಕಿದ್ದಾರೆ ಗೊತ್ತಾ? ರಾಷ್ಟ್ರೀಯ ಅಂದತ್ವ ನಿವಾರಣ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಭಯಾನಕ ಮಾಹಿತಿ ಪತ್ತೆಯಾಗಿದೆ. ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 4 ಸಾವಿರ ಮಕ್ಕಳು ದೃಷ್ಟಿ ದೋಷದ ಸಮಸ್ಯೆ ಇದ್ದು, ಸುಮಾರು 4398 ಮಕ್ಕಳಿಗೆ ಗಂಭೀರ ದೃಷ್ಟಿ ದೋಷದ ಸಮಸ್ಯೆ ಕಂಡುಬಂದಿರುವುದು ವರದಿಯಲ್ಲಿ ದೃಢಪಟ್ಟಿದೆ. ಈ ಪೈಕಿ 2066 ಮಕ್ಕಳಿಗೆ ಕನ್ನಡಕ ಕಡ್ಡಾಯವಾಗಿ ಧರಿಸುವ ಅಗತ್ಯವಿದೆ ಎಂದು ವರದಿಯಲ್ಲಿ ಹೇಳಲಾಗಿದೆ.  ದಕ್ಷಿಣ ಕನ್ನಡ ಜಿಲ್ಲೆಯ 1376 ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳನ್ನು ಒಳಗೊಂಡ ಈ ತಪಾಸಣೆ ರಾಷ್ಟ್ರೀಯ ಅಂದತ್ವ ನಿವಾರಣಾ ಯೋಜನೆಯಡಿ ಕೈಗೊಳ್ಳಲಾಗಿತ್ತು. 1,45,951 ಮಕ್ಕಳನ್ನು ಪರೀಕ್ಷಿಸಲಾಗಿದ್ದು, ಅವರಲ್ಲಿ 4,398 ಮಕ್ಕಳಿಗೆ ದೃಷ್ಟಿದೋಷ ಕಂಡುಬಂದಿದೆ. ಮೊಬೈಲ್ ಬಳಕೆಯಿಂದ ಕೇವಲ ದೃಷ್ಟಿದೋಷ ಮಾತ್ರವಲ್ಲ, ಮಾನಸಿಕ ಸಮಸ್ಯೆಗಳೂ ಕಾಣಿಸಿಕೊಂಡಿವೆ. ಇದಕ್ಕಾಗಿ ಮಾನಸಿಕ ಆರೋಗ್ಯ ಕುರಿತು ಮನೋಸ್ಥೈರ್ಯ ಎಂಬ ಜಾಗೃತಿ ಅಭಿಯಾನದ ಜೊತೆಗೆ ಪ್ರತಿ ಶಾಲೆಯ ಒಬ್ಬ ಶಿಕ್ಷಕಿಗೆ ವಿಶೇಷ ತರಬೇತಿ ನೀಡಿ ಮಕ್ಕಳ ಮಾನಸಿಕ ಸಮಸ್ಯೆ ಗುರುತಿಸಲು ಯೋಗ್ಯ ಮಾಡಲಾಗಿದೆ.‌ ಅತಿಯಾದ ಮೊಬೈಲ್ ಬಳಕೆಯು ಮಕ್ಕಳ ದೃಷ್ಟಿ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ . ಒಟ್ಟಿನಲ್ಲಿ ಆನ್‌ಲೈನ್ ಕ್ಲಾಸ್‌ ಹೆಸರಲ್ಲಿ ಮಕ್ಕಳ ಕೈ ಸೇರಿದ್ದ ಮೊಬೈಲ್‌ ಇದೀಗ ಅವರ ಕೈಯಿಂದ ಬಿಡಿಸಲಾಗದಷ್ಟು ಬಿಗಿಯಾಗಿದೆ. ಇನ್ನಾದರು ಪೋಷಕರು ಎಚ್ಚೆತ್ತು ಮಕ್ಕಳ ಮೊಬೈಲ್ ಬಳಕೆಯನ್ನು ನಿಯಂತ್ರಿಸಬೇಕು .
    ಇತ್ತೀಚಿನ ದಿನಗಳಲ್ಲಿ ಮೊಬೈಲ್ ನಮ್ಮ ಜೀವನದ ಒಂದು ಅಂಗವಾಗಿಬಿಟ್ಟಿದೆ . ಒಂದು ದಿನ ನಮ್ಮ ಕೈಯಲ್ಲಿ ಇಲ್ಲದಿದ್ದರೆ ಏನೋ ಕಳೆದುಕೊಂಡಂತಹ ಭಾವನೆ ಆವರಿಸುತ್ತದೆ . ಹಾಗೇಯೇ ಮಕ್ಕಳು ಕೂಡ ತಮ್ಮ ಬಳಿ ಸ್ಮಾರ್ಟ್ ಫೋನ್ ಇಟ್ಟುಕೊಳ್ಳುವುದು ಒಂದು ಸ್ಟೇಟಸ್ ಎಂದೆ ತಿಳಿದುಬಿಟ್ಟಿದ್ದಾರೆ . ಮಕ್ಕಳಿಗೆ 11 ರಿಂದ 13 ವರ್ಷವಾಗುವವರೆಗೂ ಮೊಬೈಲ್ ಬಳಕೆಯಿಂದ ದೂರವಿರಿಸಬೇಕು . ಮುಖ್ಯ ವಾಗಿ ಊಟ ಮಾಡುವಾಗ ಮೊಬೈಲ್ ಕೊಡುವುದನ್ನ ತಪ್ಪಿಸಬೇಕು .

Share this Article
Leave a comment

Leave a Reply

Your email address will not be published. Required fields are marked *